HomeGadag Newsವಿದ್ಯಾರ್ಥಿಗಳ ಜಾಗೃತಿ ಜಾಥಾ ಮೂಲಕ ಎಸ್‌ಐಆರ್ ಅರಿವು

ವಿದ್ಯಾರ್ಥಿಗಳ ಜಾಗೃತಿ ಜಾಥಾ ಮೂಲಕ ಎಸ್‌ಐಆರ್ ಅರಿವು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್–2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.

ಪಟ್ಟಣದ ವಿದ್ಯಾರಣ್ಯ ಸರ್ಕಲ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಕೃಷ್ಣಪ್ಪ ಧರ್ಮರ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ತೆರಳಿ ಎಸ್‌ಐಆರ್ ನಮೂನೆಗಳನ್ನು ವಿತರಿಸುತ್ತಿದ್ದು, ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ-ಯುವತಿಯೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಮನೆ, ನೆರೆಹೊರೆ ಹಾಗೂ ಸಮುದಾಯದಲ್ಲಿ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಹೇಳಿದರು.

ಜಾಥಾದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ್, ಇಸಿಒ ಆರ್.ಬಿ. ಜೋಶಿ, ಸಿಆರ್‌ಪಿಗಳಾದ ಉಮೇಶ್ ನೇಕಾರ್, ಎನ್.ಎ. ಮುಲ್ಲಾ, ತಾಲೂಕು ಪಂಚಾಯಿತಿ ಸಿಬ್ಬಂದಿ ಶ್ರೀಕಾಂತ, ಶಿಕ್ಷಕರಾದ ಪಿ.ಎಚ್. ಕೊಂಡಾಬಿಂಗಿ, ಆರ್.ಎಂ. ಕದಡಿ, ಲಕ್ಷ್ಮಣ ಪೂಜಾರ, ಕಾಂತೇಶ್ ಮುದುಗಲ್ ಸೇರಿದಂತೆ ಪಟ್ಟಣದ ವಿವಿಧ ಪ್ರೌಢಶಾಲೆಗಳ ಶಿಕ್ಷಕರು ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಸರಿಯಾದ ಮತ್ತು ನಿಖರ ಮತದಾರರ ಪಟ್ಟಿಯಿಂದ ಮಾತ್ರ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಆಗಿದೆ.”

– ಕೃಷ್ಣಪ್ಪ ಧರ್ಮರ, ಸಹಾಯಕ ನಿರ್ದೇಶಕರು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img