ಪಾಕಿಸ್ತಾನದೊಂದಿಗೆ ಕ್ರಿಕೆಟ್ ಸಂಬಂಧ ಅಂತ್ಯಗೊಳಿಸಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
Advertisement
ಕಾಶ್ಮೀರದಲ್ಲಿ ಉಗ್ರರ ದಾಳಿಯ ಬಗ್ಗೆ ಉಗ್ರವಾಗಿ ಪ್ರತಿಕ್ರಿಯಿಸಿದ ಸೌರವ್ ಗಂಗೂಲಿ, ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಾದ್ಯಂತ ಈ ದಾಳಿಯನ್ನು ಖಂಡಿಸಲಾಗುತ್ತಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು. ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗೆ ಯಾವ ಸಂಬಂಧವೂ ಬೇಡ ಎಂದು ಗಂಗೂಲಿ ಗುಡುಗಿದ್ದಾರೆ.
ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು. ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ.