ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರವೀಂದ್ರ ಜಡೇಜಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಬಿಜೆಪಿ ಸೇರಿದ್ದಾರೆ. ಈ ವಿಷಯವನ್ನು ಜಡೇಜಾ ಪತ್ನಿ, ಬಿಜೆಪಿ ಶಾಸಕ ರಿವಾಬಾ ಜಡೇಜಾ ಹಿರಂಗಪಡಿಸಿದ್ದಾರೆ.
ಜಡ್ಡು ಅವರ ಬಿಜೆಪಿ ಸದಸ್ಯತ್ವವನ್ನು ಖಚಿತಪಡಿಸುವ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯುಎಸ್‌ಎ- ವೆಸ್ಟ್ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಆದ ಬಳಿಕ ರವೀಂದ್ರ ಜಡೇಜಾ ಜೂನ್ 29ರಂದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು, ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಭಾರತ ತಂಡಕ್ಕೆ ಮರಳಲಿದ್ದಾರೆ.
ರವೀಂದ್ರ ಜಡೇಜಾ ಅವರ ಸಹೋದರಿ, ತಂದೆ ಕಾಂಗ್ರೆಸ್ ಪಕ್ಷದ ಬೆಂಬಲಿಗರಾಗಿದ್ದಾರೆ. ಆದರೆ ರವೀಂದ್ರ ಜಡೇಜಾ ಮತ್ತು ರಿವಾಬ ಜಡೇಜಾ ಮಾತ್ರ ಬಿಜೆಪಿ ಪಕ್ಷದ ಬೆಂಬಲಿಗರಾಗಿದ್ದರು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದಿದ್ದ ರಿವಾಬ ಜಡೇಜಾ ಸುಲಭ ಗೆಲುವು ಸಾಧಿಸಿದ್ದರು.