ತುಮಕೂರು:- ನಗರದ ಜಯನಗರ ಬಳಿಯ ಮಂಜುನಾಥ ನಗರದಲ್ಲಿ ಚಾಕುವಿನಿಂದ ಚುಚ್ಚಿ ಯುವಕನನ್ನು ಭೀಕರ ಕೊಲೆ ಮಾಡಿರುವ ಘಟನೆ ಜರುಗಿದೆ.
Advertisement
26 ವರ್ಷದ ಅಭಿಷೇಕ್ ಮೃತ ಯುವಕ. ಕ್ಯಾತಸಂದ್ರ ಬಳಿಯ ಸುಭಾಷ್ ನಗರ ನಿವಾಸಿಯಾಗಿರುವ ಅಭಿಷೇಕ್ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


