Crime News: ಹಾಡಹಗಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ!

0
Spread the love

ಯಾದಗಿರಿ:- ಹಾಡಹಗಲೇ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಜರುಗಿದೆ.

Advertisement

52 ವರ್ಷದ ಮಾಪಣ್ಣ ಕೊಲೆಯಾದ ದುರ್ದೈವಿ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ ಮೇಲೆ ಶಹಾಪುರಕ್ಕೆ ಬಂದಿದ್ದ ಮಾಪ್ಪಣ್ಣ, ಈ ವೇಳೆ ಶಹಾಪುರದಿಂದ ಸ್ವಗ್ರಾಮ ಮದ್ದರಕಿಗೆ ತೆರಳುವಾಗ ಮಾರ್ಗ ಮಧ್ಯೆ ಸಾದ್ಯಾಪುರ ಬಳಿ ಬೈಕ್ ಅಡ್ಡಗಟ್ಟಿರುವ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here