Crime News: ಕತ್ತು ಸೀಳಿದ ಸ್ಥಿತಿಯಲ್ಲಿ ಖ್ಯಾತ ಮಾಡೆಲ್ ಶವ ಪತ್ತೆ!

0
Spread the love

ಚಂಡೀಗಢ:- ಕತ್ತು ಸೀಳಿದ ಸ್ಥಿತಿಯಲ್ಲಿ ಖ್ಯಾತ ಮಾಡೆಲ್ ಶವ ಪತ್ತೆಯಾಗಿರುವ ಘಟನೆ ಇಲ್ಲಿನ ಸೋನಿಪತ್‌ ಕಾಲುವೆಯಲ್ಲಿ ಜರುಗಿದೆ. ಶೀತಲ್‌ ಮೃತ ಮಾಡೆಲ್. ಶೀತಲ್ ಅವರು, ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಮುಂದುವರಿದಿದೆ.

Advertisement

ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು. ಜೂನ್ 14 ರಂದು ಮಾಡೆಲ್ ಶೂಟಿಂಗ್‌ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಮರಳಿ ಮನೆಗೆ ಬಾರದೇ ಇದ್ದಾಗ ಸಹೋದರಿ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ತನಿಖೆಗೆ ಇಳಿದ ಪೊಲೀಸರಿಗೆ ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here