ಧಾರವಾಡ: ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಠಲ್ ಜೋನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ನಗರದ ಕುಮಾರೇಶ್ವರ ನಗರದಲ್ಲಿ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ.
ನೌಕರರ ಸಂಘದ ಅಧ್ಯಕ್ಷರಾಗಿದ್ದ ವಿಠಲ್:
ವಿಠಲ್ ಜೋನಿ ಅವರು ಈ ಹಿಂದೆ ಅರಣ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿದುಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಜಿಲ್ಲಾ ಆಸ್ಪತ್ರೆಗೆ ರವಾನಿಸಿದ ಶವ:
ಘಟನೆಯ ಬಳಿಕ ವಿಠಲ್ ಅವರ ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬರಬೇಕಿದೆ.










