ಶಿವಮೊಗ್ಗ:- ಮೊಬೈಲ್ ಅಂಗಡಿ ಮಾಲೀಕನಿಗೆ ಕಿಡಿಗೇಡಿಗಳು ಚಾಕು ಇರಿದಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಜರುಗಿದೆ.
ಸಯ್ಯದ್ ಬರ್ಕತ್ (32) ಚಾಕು ಇರಿತಕ್ಕೊಳಗಾದ ಯುವಕ. ಗಾಯಾಳು ಸಯ್ಯದ್ ಬರ್ಕತ್, ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಹಳೇ ದ್ವೇಷದ ಹಿನ್ನೆಲೆಯಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು, ಯುವಕನಿಗೆ ಚಾಕು ಇರಿದು ಎಸ್ಕೇಪ್ ಆಗಿದ್ದಾರೆ.
ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.



