Crime News: ಪತ್ನಿಯನ್ನೇ ಕೊಲೆಗೈದ ಪಾಪಿ ಗಂಡ!

0
Spread the love

ಮೈಸೂರು:- ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಕುಡಿತಕ್ಕೆ ಹಣ ನೀಡದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಜರುಗಿದೆ.

Advertisement

ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಪಾಪಣ್ಣ ಕೊಲೆ ಮಾಡಿರುವ ಪತಿ. ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿ ಕುಡಿತದ ಚಟಕ್ಕೆ ದಾಸನಾಗಿದ್ದ. ಹಣಕ್ಕಾಗಿ ಪತ್ನಿ ಮಕ್ಕಳನ್ನು ಪೀಡಿಸುತ್ತಿದ್ದ. ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನ ಪೀಡಿಸುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗುವಾಗ ಮಗನ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ವಿಜಯನಗರ ಪೊಲೀಸ್ ಠಾಣೆಗೆ ಮಗ ದೂರು ನೀಡಿದ್ದು, ಆರೋಪಿ ಪಾಪಣ್ಣನನ್ನ ಪೊಲೀಸರು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here