ಪುಣೆಯ ಉದ್ಯಮಿಯನ್ನು ಬರ್ಬರ ಕೊಲೆಗೈದ ದುಷ್ಕರ್ಮಿಗಳು!

0
Spread the love

ಕಾರವಾರ:- ಪುಣೆಯ ಉದ್ಯಮಿಯನ್ನು ದುಷ್ಕರ್ಮಿಗಳು ಬರ್ಬರ ಹತ್ಯೆಗೈದ ಘಟನೆ ಜರುಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ಜರುಗಿದೆ.

Advertisement

ಉದ್ಯಮಿ ವಿನಾಯಕ ನಾಯ್ಕ ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು ಪತಿ ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ.

ಮಹಿಳೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ರವಾನೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು ಎಂಬುವುದು ತಿಳಿದುಬಂದಿಲ್ಲ. ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು.

ಇಂದು ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.


Spread the love

LEAVE A REPLY

Please enter your comment!
Please enter your name here