HomeIndia Newsವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ಹೆಚ್ಚಾದ ಜನಸಂದಣಿ: 750 ಭಕ್ತರು ಅಸ್ವಸ್ಥ

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ಹೆಚ್ಚಾದ ಜನಸಂದಣಿ: 750 ಭಕ್ತರು ಅಸ್ವಸ್ಥ

For Dai;y Updates Join Our whatsapp Group

Spread the love

ಪುರಿ: ಒಡಿಶಾದ ಪುರಿ ಜಗನ್ನಾಥನ ರಥಯಾತ್ರೆಗಾಗಿ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 8 ಕಂಪನಿಗಳು ಸೇರಿದಂತೆ ಸುಮಾರು 10,000 ಭದ್ರತಾ ಸಿಬ್ಬಂದಿಯನ್ನು ಈ ರಥಯಾತ್ರೆಗೆ ನಿಯೋಜಿಸಲಾಗಿತ್ತು. ಆದ್ರೆ ಪುರಿ ಜಗನ್ನಥ ರಥಯಾತ್ರೆ ವೇಳೆ ಶಾಖದ ತೀವ್ರತೆ, ಜನಸಂದಣಿಯ ಒತ್ತಡ ಮತ್ತು ಆಯಾಸದಿಂದಾಗಿ ಅಸ್ವಸ್ಥರಾದವರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ.

ಅಸ್ವಸ್ಥರಾಗಿರುವ ಭಕ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಜನರಿಗೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. 230 ಕ್ಕೂ ಹೆಚ್ಚು ಭಕ್ತರನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಮಾರು 520 ಮಂದಿಯನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ವಸ್ಥರಾದವರ ಪೈಕಿ ಹೆಚ್ಚಿನವರನ್ನು ಪ್ರಥಮ ಚಿಕಿತ್ಸೆ ನೀಡಿ ನಂತರ ಬಿಡುಗಡೆ ಮಾಡಲಾಗಿದೆ. ತೀವ್ರವಾಗಿ ಅಸ್ವಸ್ಥರಾದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಕಟಕ್‌ನ ಹಾಸ್ಪಿಟಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!