ನವಲಗುಂದ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ CRPF ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಮೂಲತಃ ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದವನಾದ ಶೇಕಪ್ಪ ಅಂಕಲಿ (45) ಮೃತಪಟ್ಟ ದುರ್ದೈವಿಯಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯಕ್ಕೊಳಗಾಗಿದ್ದ ಯೋಧ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಲವಡಿ ಗ್ರಾಮದಲ್ಲಿ ಇಂದು ಸಂಜೆ ಪಾರ್ಥವ ಶರೀರ ಮೆರವಣಿಗೆ ನಡೆಯಲಿದ್ದು, ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ಜರುಗಲಿದೆ ಎಂದು ತಿಳಿದು ಬಂದಿದೆ.