CT ರವಿ ಅರೆಸ್ಟ್: ಚಿಕ್ಕಮಗಳೂರು ಬಂದ್ ಗೆ ಕರೆ, ಖಾಕಿ ಫುಲ್ ಅಲರ್ಟ್!

0
Spread the love

ಚಿಕ್ಕಮಗಳೂರು:- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ವಿಚಾರವಾಗಿ CT ರವಿ ಅವರನ್ನು ಪೊಲೀಸರು ಹೀಗಾಗಲೇ ಅರೆಸ್ಟ್ ಮಾಡಿದ್ದಾರೆ.

Advertisement

ಇದೇ ವಿಚಾರವಾಗಿ ಕೆಂಡಕಾರಿರುವ ನಗರ ಬಿಜೆಪಿ ಮುಖಂಡರು, ಇಂದು ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here