ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಎಪಿಎಂಸಿ ಆವರಣದಲ್ಲಿರುವ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕಟ್ಟಿಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ಶಿಕ್ಷಕಿಯರು ನವದುರ್ಗೆಯರ ದರ್ಶನ ರೂಪಕಗಳ ಮೂಲಕ ಜನಮನ ಸೆಳೆದರು.
ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯಶ್ರೀ ಸ್ವಾಮಿ ಜಗನ್ನಾಥಾನಂದರವರು, ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ವೈ. ಚಿಕ್ಕಟ್ಟಿ ಮುಂತಾದವರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಎಸ್.ಎಚ್. ದೇಶಪ್ಪನವರು ಕಾರ್ಯಕ್ರಮ ನಿರೂಪಿಸಿದರು.



