ವಿಜಯಸಾಕ್ಷಿ ಸುದ್ದಿ, ಗದಗ : ಉತ್ತಮ ಪರಿಸರದಲ್ಲಿ ಬೆಳೆದ ವ್ಯಕ್ತಿತ್ವಯ ವ್ಯಕ್ತಿತ್ವವು ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬಲ್ಲದು ಎಂದು ಸರ್ಕಾರಿ ಪ್ರಥಮದರ್ಜೆ ಮಹಿಳಾ ಮಹಾವಿದ್ಯಾಲಯದ ಪ್ರಾ. ಎಂ.ಯು. ಹಿರೇಮಠ ಅಭಿಪ್ರಾಯಪಟ್ಟರು.
ಇತ್ತೀಚೆಗೆ ಸ್ಥಳೀಯ ಪಂಡಿತ ಪಂಚಾಕ್ಷರ ಗವಾಯಿಗಳವರ ಕಲಾ ಮಹಾವಿದ್ಯಾಲಯದ 2023-24ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ, ಎನ್.ಎಸ್.ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀ ವಿರೇಶ್ವರ ಪುಣ್ಯಾಶ್ರಮ ಉತ್ತಮ ಸಂಸ್ಕಾರಗಳನ್ನು ನೀಡುವ ಕ್ಷೇತ್ರವಾಗಿದ್ದು, ಇದಕ್ಕೆ ಪಂಡಿತ ಪಂಚಾಕ್ಷರ ಹಾಗೂ ಪುಟ್ಟರಾಜ ಗವಾಯಿಗಳರವರು ಅಡಿಪಾಯ ಹಾಕಿದ್ದಾರೆ. ಅದನ್ನು ಪೂಜ್ಯ ಕಲ್ಲಯ್ಯಜ್ಜನವರು ಮುಂದುವರೆಸಿಕೊಂಡು ಹೋಗುತ್ತಿದ್ದು, ಒಟ್ಟಾರೆ ಉತ್ತಮ ಸಂಸ್ಕಾರ ನೀಡುವ ಪುಣ್ಯಾಶ್ರಮವಾಗಿದೆ. ಪುಟ್ಟರಾಜ ಗವಾಯಿಗಳರವರಿಂದ ಸ್ಥಾಪಿಸಿದ ಪಂಡಿತ ಪಂಚಾಕ್ಷರ ಗವಾಯಿಗಳರವರ ಕಲಾ ಮಹಾವಿದ್ಯಾಲಯದಲ್ಲಿ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಸಂಸ್ಕಾರ ಬೆಳೆಸಿಕೊಂಡು ಆದರ್ಶ ಬದುಕನ್ನು ಕಟ್ಟಿಕೊಂಡಿದ್ದಾರೆಂದು ಹೇಳಿದರು.
ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಪೂಜ್ಯ ಕಲ್ಲಯ್ಯಜ್ಜನವರು ಮಾತನಾಡಿ, ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು. ಅಂದಾಗ ವಿದ್ಯಾರ್ಥಿಗಳ ಬದುಕು ಹಸನಾಗಲು ಸಾಧ್ಯ. ಪೂಜ್ಯರು ಹಗಲಿರುಳು ಎನ್ನದೇ ಈ ಶಿಕ್ಷಣ ಸಂಸ್ಥೆಯನ್ನು ಕಟ್ಟಿದ್ದು ಅವರ ಹೆಸರಿಗೆ ಧಕ್ಕೆ ತರಹದ ಹಾಗೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯನಿರ್ವಹಿಸಬೇಕೆಂದರು.
ಪ್ರೊ. ಎಂ.ಎನ್. ಹೊಂಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಡಾ. ವ್ಹಿ.ಎ. ನಿಂಗೋಜಿ ವಾರ್ಷಿಕ ವರದಿ ಪ್ರಸ್ತುತ ಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಆರ್.ಎಸ್. ದಾನರಡ್ಡಿ ಸ್ವಾಗತಿಸಿದರು. ಕ್ರೀಡಾ ವಿಜೇತರಿಗೆ ಪ್ರೊ. ಎಫ್.ಬಿ. ಅಂಗಡಿ ವಿಜೇತ ಸ್ಪರ್ಧಾಳುಗಳಿಗೆ ಬಹಿಮಾನ ವಿತರಿಸಿದರು. ಸ್ಪರ್ಧಾ ಕಾರ್ಯಕ್ರಮವನ್ನು ಪ್ರೊ. ಎಂ.ಎನ್. ಹೊಂಬಾಳಿ ನಿರೂಪಿಸಿದರು.
ಪ್ರೊ. ಕವಿತಾ ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರೆ, ಪ್ರಧಾನ ಕಾರ್ಯದರ್ಶಿ ಮಧುರಾಜ ಬಳ್ಳಾರಿ ವಂದಿಸಿದರು.