ಅಹಮದಾಬಾದ್: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಕೆಲ ಹೊತ್ತು ಆತಂಕದ ಸನ್ನಿವೇಶ ನಿರ್ಮಾಣವಾಗಿದೆ. ಸ್ಟೇಡಿಯಂನ ಗೇಟ್ ನಂಬರ್ 1ರ ಬಳಿ ಘಟನೆ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದ ಕೆಲಹೊತ್ತು ಆತಂಕ ಮನೆಮಾಡಿತ್ತು.
ಘಟನೆ ನಡೆದ ತಕ್ಷಣವೇ ಬೆಂಕಿಯನ್ನು ನಂದಿಸಲಾಯಿತು. ಕ್ರೀಡಾಂಗಣದ ಹೊರಗಿನ ಫುಟ್‌ಪಾತ್‌ನಲ್ಲಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವವರ ನಿರ್ಲಕ್ಷ್ಯದಿಂದಾಗಿ ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ. ಸಿಲಿಂಡರ್ ಸ್ಫೋಟದಿಂದಾಗಿ ಪಂದ್ಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಆಪರೇಷನ್ ಸಿಂಧೂರಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಮಾರಂಭವನ್ನು ಭಾರತೀಯ ಸೇನೆಗೆ ಸಮರ್ಪಿಸಲಾಗುತ್ತದೆ. ಖ್ಯಾತ ಗಾಯಕ ಶಂಕರ್ ಮಹದೇವನ್ ಸೇರಿದಂತೆ ಅನೇಕರು ಪ್ರದರ್ಶನ ನೀಡಲಿದ್ದಾರೆ.