ಸಿಲಿಂಡರ್ ಸ್ಫೋಟ; ಆರು ಜನರಿಗೆ ಗಾಯ, ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್ – ಗ್ರಾಮಸ್ಥರ ಆಕ್ರೋಶ!

0
Spread the love

ಗದಗ: ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

Advertisement

ಬಸಪ್ಪ ಆದಿವರ ಎನ್ನುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 14 ವರ್ಷದ ಶರಣಪ್ಪ ಹಾಲೀನ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿವೆ. ಅಷ್ಟೇ ಅಲ್ಲದೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲಾ ಎನ್ನುವವರಿಗೆ ಗಾಯಗಾಳಗಿದ್ದು, ಗಾಯಗೊಂಡವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ಯಾಸ್ ಸೋರಿಕೆಯಿಂದಾಗಿ ಅಕ್ಕಪಕ್ಕದ ನಿವಾಸಿಗಳ ಗಮನಕ್ಕೆ ಬಂದು ಮನೆ ಬೀಗ ಒಡೆಯುತ್ತಿದ್ದಂತೆಯೇ ಸಿಲಿಂಡರ್ ಏಕಾ ಏಕಿ ಸ್ಫೋಟಗೊಂಡಿದೆ. ಇದರಿಂದಾಗಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಜನ ಗಾಯಗೊಂಡಿದ್ದಾರೆ.

ಆದ್ರೆ ಈ ಘಟನೆ ನಂತರ ಗ್ರಾಮಸ್ಥರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಎಷ್ಟೋ ಭಾರಿ ಕಾಲ್ ಮಾಡಿದ್ರು, ಆ್ಯಂಬುಲೆನ್ಸ್ ಸಕಾಲಕ್ಕೆ ಬಂದಿಲ್ಲ ಎಂದು ಕಿಡಿಕಾರಿದ್ದು, ನಾವು ಬೈಕ್ ಮೇಲೆ ಗಾಯಾಳುಗಳನ್ನು ಕರೆದುಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here