ಸಿಲಿಂಡರ್ ಸೋರಿಕೆ: ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಸಾವು!

0
Spread the love

ಬೆಂಗಳೂರು:-ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಮೂರಂತಸ್ತಿನ ಕಟ್ಟಡ ಬೆಂಕಿಗಾಹುತಿಯಾಗಿರುವ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ಜರುಗಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

Advertisement

ಉದಯ್ ಬಾನು, ರೋಶನ್ ಮೃತ ಕಾರ್ಮಿಕರು. ಸತೀಶ್ ಎನ್ನುವವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಬಿಲ್ಡಿಂಗ್‌ನಲ್ಲಿ ವುಡ್ ವರ್ಕ್ಸ್ ಮಾಡಲಾಗಿತ್ತು. ಈ ವೇಳೆ ಅಲ್ಲೇ ಕೆಲಸ ಮಾಡುತ್ತಿದ್ದ ಕೆಲಸಗಾರರ ಮೇಲೆ ಬೆಂಕಿ ಬಿದ್ದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಧಗಧಗನೆ ಹೊತ್ತಿ ಉರಿದ ಬೆಂಕಿಯಿಂದ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ.

ಕಟ್ಟಡದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here