ಚೆನ್ನೈ: ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಶದ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಕಂಡಿದ್ದು, ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ ಗೃಹ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಅಭಾವ ತಲೆದೋರಿದೆ.
ತಮಿಳುನಾಡಿನ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಗಳು ಈ ಪೂರೈಕಾ ತೊಂದರೆ ಹಿನ್ನೆಲೆಯಲ್ಲಿ ಬಂಡವಾಳದ ಸಮಸ್ಯೆಯನ್ನು ಎದುರಿಸುತ್ತಿದ್ದು, ಕೆಲವು ಹೋಟೆಲ್‌ಗಳು ಬಂದ್ ಮಾಡುವ ಪರಿಸ್ಥಿತಿಯಲ್ಲಿವೆ.
ಚೆನ್ನೈ ಹೋಟೆಲ್ ಅಸೋಸಿಯೇಷನ್ ತಮಿಳುನಾಡು ಮುಖ್ಯಮಂತ್ರಿ ಗೆ ಪತ್ರ ಬರೆದು, ಸಿಲಿಂಡರ್ ಪೂರೈಕೆಗೆ ಸಮರ್ಪಕ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ಪತ್ರದಲ್ಲಿ, “ಸಿಲಿಂಡರ್ ಸಿಗದೆ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ವಿತರಕರು ಪೂರೈಕೆ ಸಂಪೂರ್ಣ ಸ್ಥಗಿತ ಮಾಡಿದ್ದಾರೆ. ನೋ ಸ್ಟಾಕ್ ಎಂದು ಹೇಳುತ್ತಿದ್ದು, ಬಹುತೇಕ ರೆಸ್ಟೋರೆಂಟ್ ಬಂದ್ ಮಾಡಲು ಎದುರಿಸುತ್ತಿದ್ದಾರೆ,” ಎಂದು ವಿವರಿಸಲಾಗಿದೆ.
ಅಸೋಸಿಯೇಷನ್ ಅವರು ಸರ್ಕಾರದ ತಕ್ಷಣದ ಹಸ್ತಕ್ಷೇಪಕ್ಕೆ ಆಗ್ರಹಿಸಿ, ಕಮರ್ಷಿಯಲ್ ಸಿಲಿಂಡರ್ ಪೂರೈಕೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.



