ಗದಗ:– ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಜನತೆ ಸಂಕಷ್ಟಕ್ಕೀಡಾಗಿದ್ದಾರೆ.

ಅದರಂತೆ ಮಧ್ಯಪ್ರಾಚ್ಯದ ಯುದ್ಧದ ಎಫೆಕ್ಟ್ ಇದೀಗ ಗದಗ ಜಿಲ್ಲೆಗೂ ತಟ್ಟಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಇಂಡಿಯನ್ ಗ್ಯಾಸ್ ಏಜೆನ್ಸಿಯಲ್ಲಿ ಸಿಲಿಂಡರ್ ಸ್ಟಾಕ್ ಕೊನೆಗೊಂಡಿದೆ. ಕಮರ್ಷಿಯಲ್ ಮತ್ತು ಗೃಹ ಬಳಕೆಗೆ ಬೇಕಾದ ಗ್ಯಾಸ್ ಸಿಲಿಂಡರ್ ಲಭ್ಯವಾಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.
ಇನ್ನೂ ಗ್ರಾಮೀಣ ಪ್ರದೇಶದಿಂದ ಸಿಲಿಂಡರ್ ಪಡೆಯಲು ಬಂದವರು ಗ್ಯಾಸ್ ಸಿಗದೆ ಖಾಲಿ ಸಿಲಿಂಡರ್ ಹಿಡಿದು ತಮ್ಮ ತಮ್ಮ ಊರಿನತ್ತ ತೆರಳಿದ್ದಾರೆ. ಇದೇ ವೇಳೆ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.



