ಸಿಲಿಂಡರ್ ಸ್ಪೋಟ: ಧಗಧಗನೇ ಹೊತ್ತಿ ಉರಿದ ಬೇಕರಿ

0
Spread the love

ಶಿವಮೊಗ್ಗ: ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಬೇಕರಿಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಬೇಕರಿ ಮಾಲೀಕನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Advertisement

ಇನ್ನು ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ದೊಡ್ಡ ದುರಂತ ತಪ್ಪಿದೆ. ಹೌದು, ಬೇಕರಿ ಪಕ್ಕದಲ್ಲೇ ಪೇಟ್ರೋಲ್ ಬಂಕ್ ಇತ್ತು. ಅದೃಷ್ಟವಶಾತ್​ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here