HomeGadag Newsಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ

ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಜರುಗಿತು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು  ಡಿ.ದೇವರಾಜ ಅರಸು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆ ಅಂಗವಾಗಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕ್ಕಮ್ಮನವರ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಸೇರಿದಂತೆ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img