ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ!

0
Spread the love

ಬೆಂಗಳೂರು:- ಮೆಜೆಸ್ಟಿಕ್ ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ರೈಲು ಹಳಿಗೆ ಹಾರಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ.

Advertisement

ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ (35)​​ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ಮಧ್ಯಾಹ್ನ 3.19ರ ಸುಮಾರಿಗೆ ವೀರೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪ್ಲಾಟ್​ಫಾರಂ 3ರಲ್ಲಿ ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದ ವೀರೇಶ್​​ ನನ್ನು ಮೆಟ್ರೋ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವೀರೇಶ್​ನನ್ನು ಆ್ಯಂಬುಲೆನ್ಸ್​ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಸದ್ಯ ವೀರೇಶ್​ಗೆ ತಲೆಗೆ ತೀವ್ರವಾದ ಗಾಯ ಹಿನ್ನಲೆ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ವೀರೇಶ್ ಕುಟುಂಬಸ್ಥರು ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ವೀರೇಶ್​​ ರಕ್ಷಣೆ ಬೆನ್ನಲ್ಲೆ ಅತ್ತ ಹಸಿರು ಮಾರ್ಗದಲ್ಲಿ ಸಂಚಾರ ಪುನಾರಂಭಗೊಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here