ಡಿ.ಕೆ. ಶಿವಕುಮಾರ್ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

0
Spread the love

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

Advertisement

ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ.

ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರ? ಇಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಪ್ರಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು ಎಂದು ಅವರು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here