HomePolitics Newsಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ಡಿ.ಕೆ. ಸುರೇಶ್

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ: ಡಿ.ಕೆ. ಸುರೇಶ್

For Dai;y Updates Join Our whatsapp Group

Spread the love

ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸುರೇಶ್ ಅವರು ಗುರುವಾರ ಮಾತನಾಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಕೂಗಿನ ನಡುವೆ ನಾನೇ ಐದು ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ್ದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿ ಯಾಗಿರುವವರು ಮುಂದುವರಿಯುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನಿದೆ? ಅವರು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕಾಂಗ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನು ಸಿಎಂ ಮಾಡಿದೆ. ಅವರು ಸರ್ಕಾರ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಚರ್ಚೆ ಏನು?” ಎಂದು ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನನ್ನ ಮುಂದೆ ಯಾವುದೇ ಆಯ್ಕೆ ಇಲ್ಲ, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರು ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದಾರೆ, ಈಗಲೂ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹಿಂದೆಯೂ ಹೇಳಿದ್ದರು. ಈಗಲೂ ಹೇಳಿದ್ದಾರೆ. ಮುಂದೆಯೂ ಹೇಳುತ್ತಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಹೈಕಮಾಂಡ್ ತೀರ್ಮಾನವನ್ನು ಪಾಲಿಸಿ ಶಿಸ್ತು ಕಾಪಾಡುವುದು ಅವರ ಕರ್ತವ್ಯ. ಹಾಗಾಗಿ ಅವರು ಕೆಲವು ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ” ಎಂದರು.

ಡಿ.ಕೆ. ಶಿವಕುಮಾರ್ ಸಿಎಂ ಆಗುವ ಭರವಸೆ, ನಂಬಿಕೆ ಈಗಲೂ ಇದೆ

ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆಯನ್ನು ನೀವು ವ್ಯಕ್ತಪಡಿಸಿದ್ದೀರಿ ಎಂದು ಕೇಳಿದಾಗ, “ಆ ಭರವಸೆ ಇಂದೂ ಇದೆ, ನಾಳೆಯೂ ಇರುತ್ತದೆ. ನಂಬಿಕೆ ಎಂಬುದು ನಮ್ಮ ಜೀವನ ನಡೆಸಲು ಪ್ರೇರಣೆ. ನಂಬಿಕೆ ಇಲ್ಲದಿದ್ದರೆ ಜೀವನ ಮಾಡುವುದೇ ಕಷ್ಟವಾಗುತ್ತದೆ. ನನಗೆ ಈಗಲೂ ಆಸೆ ಇದೆ. ಅವರು ಪಕ್ಷಕ್ಕೆ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸ ಇಟ್ಟು ಶಿವಕುಮಾರ್ ಅವರಿಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ” ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!