ಬೆಂಗಳೂರು: ಪ್ರಯಾಗ್‌ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಇದೀಗ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್‌ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ ನಂತರ ಪ್ರಯಾಗ್‌ರಾಜ್‌ನಿಂದ ವಾಪಾಸ್ ಆಗಲಿದ್ದಾರೆ. ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ.
ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು.