ಹುಬ್ಬಳ್ಳಿ: ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ತನ್ನ ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪೀಟರ್ ಮೃತ ದುರ್ದೈವಿಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ ಕಳೆದ ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಪೀಟರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೆಂಡತಿ ಟಾರ್ಚರ್ ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡ್ಯಾಡಿ ಆಯಮ್ ಸಾರಿ. ಪಿಂಕಿ(ಹೆಂಡತಿ) ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆಥ್ ಎಂದು ಡೆತ್ನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಪೀಟರ್ ಸಂಬಂಧಿಕರು, ಶವ ಸಂಸ್ಕಾರ ಪೆಟ್ಟಿಗೆ ಮೇಲೆ ಹೆಂಡತಿ ಕಾಟ ತಾಳಲಾರದೆ ಸತ್ತನು ಎಂದು ಬರೆದಿದ್ದಾರೆ.
ಫಿಬಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದಳು ಇತ್ತೀಚಿಗೆ ಬೇರೆ ವ್ಯಕ್ತಿ ಜೊತೆಗೆ ಸುತ್ತಾಟ ನಡೆಸುತ್ತಿದ್ದಳು ಇದನ್ನು ಪೀಟರ್ ಮತ್ತು ಕುಟುಂಬಸ್ಥರು ಪ್ರಶ್ನೆ ಮಾಡಿದ್ದರು. ಆದ್ರೆ, ಇದಕ್ಕೆ ಪಿಂಕಿ, ನನ್ನ ಜೀವನ ನನ್ನಿಷ್ಟ ಎಂದಿದ್ದಳು. ಅಲ್ಲದೆ ಇತ್ತೀಚೆಗೆ ಪಿಂಕಿ ಹಲವಾರು ತಿಂಗಳು ಗಂಡನಿಂದ ದೂರುವಾಗಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಳು. ಇಂದು ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ಇತ್ತು. ಆದ್ರೆ, ವಿಚ್ಚೇದನಕ್ಕೆ 20 ಲಕ್ಷ ರೂ. ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದ್ದು, ಇದರಿಂದ ಪೀಟರ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.