ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಈ ಕೂಡಲೇ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಡಾ. ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನದಿAದ ಗೃಹ ಸಚಿವನಾಗಿದ್ದೇನೆ ಎನ್ನುವುದನ್ನು ಮರೆತಿರುವ ಅಮಿತ್ ಶಾ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಸಮಯದಿಂದ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಾ ಬಂದಿದೆ ಎಂದು ಆರೋಪಿಸಿದರು.

ಪಟ್ಟಣದ ಸಿದ್ಧಾರೂಡ ಮಠದಿಂದ ಆರಂಭಗೊAಡ ಪ್ರತಿಭಟನಾ ಮೆರವಣಿಗೆಯು ಸೂಡಿ ವೃತ್ತ, ಮುಲ್ಲಾನಭಾವಿ, ಪೋತರಾಜನ ಕಟ್ಟೆಯ ಮೂಲಕ ತಹಸೀಲ್ದಾರ್ ಕಚೇರಿಯವರೆಗೆ ತಲುಪಿತು. ಈ ಮೊದಲು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಸಂಖ್ಯೆಯ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶವನ್ನು ಹೊರಹಾಕಿದರು.


Spread the love

LEAVE A REPLY

Please enter your comment!
Please enter your name here