ತ್ವಚೆಯು ಯಾವುದೇ ಮೊಡವೆ, ಕಲೆಗಳು ಇಲ್ಲದೇ ಸುಂದರವಾಗಿ ಇರಬೇಕು ಎಂದು ಪ್ರತಿಯೊಬ್ಬರೂ ಕೂಡ ಹಂಬಲಿಸುತ್ತಾರೆ. ಆದರೆ ಕೆಲವರ ಮುಖದಲ್ಲಿ ಕಪ್ಪು ಕಲೆಗಳು ಕಂಡುಬರುತ್ತದೆ.ಇದು ಇನ್ನೊಬ್ಬರೊಂದಿಗೆ ಮಾತಾನಾಡುವಾಗ ಅಥವಾ ಸಮಾರಂಭಗಳಲ್ಲಿ ಪಾಲ್ಗೊಳ್ಳುವಾಗ ಮುಚುಗರಕ್ಕೀಡು ಮಾಡುತ್ತದೆ.
ನೀವೂ ಕೂಡ ಇಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಸ್ಟೋರಿಯನ್ನು ಪೂರ್ತಿಯಾಗಿ ಓದಿ. ಮುಖದಲ್ಲಿ ಕಪ್ಪು ಕಲೆಗಳು ಉಂಟಾಗಲು ಕಾರಣವೇನು? ಈ ರೀತಿಯ ಕಪ್ಪು ಕಲೆಗಳನ್ನು ಹೋಗಲಾಡಿಸಲು ಚಿಕಿತ್ಸೆ ಇದೆಯಾ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿವೆ.
ಹಬೆ: ಮೂಗಿನ ಮೇಲೆ ಕಪ್ಪು ಚುಕ್ಕೆಗಳಿಂದ ಬಳಲುತ್ತಿರುವವರು ಅವುಗಳನ್ನು ಹೋಗಲಾಡಿಸಲು ವಾರಕ್ಕೆ ಎರಡರಿಂದ ಮೂರು ಬಾರಿ ಸ್ಟೀಮ್ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ. ಅಲ್ಲದೇ.. ಚರ್ಮದಿಂದ ಎಣ್ಣೆ ಬಿಡುಗಡೆಯಾಗುವುದು ಕಡಿಮೆಯಾಗುತ್ತದೆ. ಬ್ಲ್ಯಾಕ್ ಹೆಡ್ಸ್ ಸಮಸ್ಯೆ ಕಡಿಮೆಯಾಗಿ ಚರ್ಮ ಮೃದುವಾಗುತ್ತದೆ ಎನ್ನುತ್ತಾರೆ ತಜ್ಞರು.
ಅಡುಗೆ ಸೋಡಾ, ನೀರು: ಒಂದು ಬೌಲ್‌ನಲ್ಲಿ ಒಂದು ಚಮಚ ಅಡುಗೆ ಸೋಡಾ ಮತ್ತು ಸ್ವಲ್ಪ ನೀರು ಮಿಶ್ರಣ ಮಾಡಿ. ಈ ಮಿಶ್ರಣವನ್ನು ಬ್ಲ್ಯಾಕ್ ಹೆಡ್ಸ್ ಮೇಲೆ ಮಸಾಜ್ ಮಾಡಿ. 15 ನಿಮಿಷಗಳ ನಂತರ, ನಿಮ್ಮ ಮುಖವನ್ನು ಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ಮೃದುವಾದ ಟವೆಲ್ನಿಂದ ಒರೆಸಿಕೊಳ್ಳಿ. ಹೀಗೆ ಮಾಡುವುದರಿಂದ ಬ್ಲ್ಯಾಕ್ ಹೆಡ್ಸ್ ಉಂಟಾಗಲು ಕಾರಣವಾಗುವ ಡೆಡ್ ಸ್ಕಿನ್ ಸೆಲ್ಗಳು ನಿವಾರಣೆಯಾಗುತ್ತವೆ ಎನ್ನುತ್ತಾರೆ ತಜ್ಞರು.
ಜೇನುತುಪ್ಪ ಮತ್ತು ದಾಲ್ಚಿನ್ನಿ ಪುಡಿ: ಜೇನುತುಪ್ಪ ಮತ್ತು ದಾಲ್ಚಿನ್ನಿ ಪುಡಿಯನ್ನು ಸಮಾನ ಭಾಗಗಳಲ್ಲಿ ಮಿಶ್ರಣ ಮಾಡಿ ಮತ್ತು ಪೇಸ್ಟ್ ತಯಾರಿಸಿ. ನಂತರ ಅದನ್ನು ಮೂಗಿನ ಮೇಲೆ ಮಾಸ್ಕ್ ಆಗಿ ಹಚ್ಚಿಕೊಳ್ಳಿ. 10ರಿಂದ 15 ನಿಮಿಷಗಳ ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಈ ರೀತಿ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಆಪಲ್ ಸೈಡರ್ ವಿನೆಗರ್: ಸಣ್ಣ ಬಟ್ಟಲಿನಲ್ಲಿ ಆಪಲ್ ಸೈಡರ್ ವಿನೆಗರ್ ಮತ್ತು ನೀರನ್ನು ಸಮಾನ ಪ್ರಮಾಣದಲ್ಲಿ ತೆಗೆದುಕೊಳ್ಳಿ. ಇದರಲ್ಲಿ ಹತ್ತಿ ಉಂಡೆಯನ್ನು ಅದ್ದಿ ಮೂಗಿನ ಮೇಲೆ ಮಸಾಜ್ ಮಾಡಿ. ಈ ಸಲಹೆಯು ಬ್ಲ್ಯಾಕ್ ಹೆಡ್ಸ್ ಸಮಸ್ಯೆಗೆ ಉತ್ತಮ ಪರಿಹಾರವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.
ಸಕ್ಕರೆ ಮತ್ತು ನಿಂಬೆ ರಸ: ಒಂದು ಬೌಲ್‌ನಲ್ಲಿ ಎರಡು ಚಮಚ ಸಕ್ಕರೆಯನ್ನು ತೆಗೆದುಕೊಂಡು ಅದರಲ್ಲಿ ನಿಂಬೆಯನ್ನು ಸಂಪೂರ್ಣವಾಗಿ ಹಿಂಡಿ. ಮಿಶ್ರಣವನ್ನು ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಮೂಗಿನ ಮೇಲೆ ಅನ್ವಯಿಸಿ. ಹೀಗೆ ಮಾಡುವುದರಿಂದ ಬ್ಲ್ಯಾಕ್ ಹೆಡ್ಸ್ ಸಮಸ್ಯೆ ಬೇಗ ಕಡಿಮೆಯಾಗುತ್ತದೆ ಎನ್ನುತ್ತಾರೆ ತಜ್ಞರು.