ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಜಾಮೀನು ಅರ್ಜಿ ತಿರಸ್ಕೃತವಾಗಿರುವ ಹಿನ್ನೆಲೆ, ದರ್ಶನ್ ಇನ್ನೂ ದೀರ್ಘಕಾಲ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಇರುವ ದರ್ಶನ್, ಇತ್ತೀಚಿನ ದಿನಗಳಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡದೇ ಮೌನವಾಗಿದ್ದಾರೆ ಎನ್ನಲಾಗಿದೆ. ಬ್ಯಾರಕ್‌ನ ಮೂಲೆಯಲ್ಲಿ ಒಬ್ಬರೇ ಕುಳಿತು ಸಮಯ ಕಳೆಯುತ್ತಿದ್ದು, ಮಾನಸಿಕವಾಗಿ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆನ್ನುನೋವು ತೀವ್ರವಾಗಿದ್ದು, ಜೈಲಿನ ಊಟವೂ ಒಗ್ಗುತ್ತಿಲ್ಲ. ಸರಿಯಾಗಿ ನಿದ್ದೆ ಬಾರದ ಕಾರಣ ದರ್ಶನ್ ದೈಹಿಕವಾಗಿ ಕುಗ್ಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಇತ್ತ ಪತಿಯ ಸಂಕಷ್ಟ ಕಂಡು ಪತ್ನಿ ವಿಜಯಲಕ್ಷ್ಮಿ ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರ ಫೋಟೋ ಹಂಚಿಕೊಂಡು ಹಾರ್ಟ್ ಬ್ರೇಕ್ ಇಮೋಜಿ ಪೋಸ್ಟ್ ಮಾಡುವ ಮೂಲಕ ತಮ್ಮ ನೋವನ್ನು ಅಭಿವ್ಯಕ್ತಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿರ್ಧಾರದಿಂದ ದರ್ಶನ್ ಕುಟುಂಬಕ್ಕೆ ಭಾರೀ ನಿರಾಸೆ ಉಂಟಾಗಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಅಭಿಮಾನಿಗಳಲ್ಲೂ ಚರ್ಚೆ ಶುರುವಾಗಿದೆ.



