Home Crime News ಚಾರ್ಜ್ ​ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಚಾರ್ಜ್ ​ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್

0
ಚಾರ್ಜ್ ​ಶೀಟ್ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ ಆರೋಪದ ಮೇಲೆ ಪರಪ್ಪನ ಅಗ್ರಹಾರದಿಂದ ಸೆಂಟ್ರಲ್ ಜೈಲ್​ಗೆ ದರ್ಶನ್ ಶಿಫ್ಟ್​ ಆಗಿದ್ದಾರೆ. ಇಂದು ದರ್ಶನ್ ನ್ಯಾಯಾಂಗ ಬಂಧನ ಅಂತ್ಯವಾಗಿದೆ. ಹೀಗಾಗಿ ನಿನ್ನೆ ರಾತ್ರಿಯಿಂದಲೇ‌ ನಟ ದರ್ಶನ್​ ಟೆನ್ಷನ್ ಶುರುವಾಗಿದೆ. ದರ್ಶನ್ ವಿರುದ್ಧ ಪೊಲೀಸರು ಸೂಕ್ತ ತನಿಖೆ ಮಾಡಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ.

ಆದರೆ ಇದರಲ್ಲಿನ ಗೌಪ್ಯ ಮಾಹಿತಿಗಳು ಬಹಿರಂಗ ಪಡಿಸಬಾರದು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಚಾರ್ಜ್ ​ಶೀಟ್​ನಲ್ಲಿ ಮಾಹಿತಿಗಳನ್ನು ಸೋರಿಕೆ ಮಾಡದಂತೆ ನಿರ್ಬಂಧ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸುಮಾರು ಮೂರು ತಿಂಗಳ ಬಳಿಕ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 3991 ಪುಟಗಳ ಆರೋಪ ಪಟ್ಟಿಯಲ್ಲಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ರಾಕ್ಷಸ ಕೃತ್ಯ ಬಯಲಾಗಿದೆ. ಇತ್ತ ರೇಣುಕಾಸ್ವಾಮಿ ಕುಟುಂಬಸ್ಥರು ಕಣ್ಣೀರು ಹಾಕ್ತಿದ್ರೆ ಅತ್ತ ಡಿ ಗ್ಯಾಂಗ್ ಜೈಲಿನಿಂದ ಹೊರ ಬರಲು ಸಿದ್ಧತೆಯಲ್ಲಿ ತೊಡಗಿದೆ.


Spread the love

LEAVE A REPLY

Please enter your comment!
Please enter your name here