ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ನಟ ದರ್ಶನ್ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹಾಗೂ ಸುಪ್ರೀಂಕೋರ್ಟ್ ಆದೇಶಿಸಿದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ . ಕಾನೂನಿನ ಮುಂದೆ ಎಲ್ಲರೂ ಸಮಾನರು. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ – ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ,
ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ . ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ಸಂದೇಶ ಹಾಕಿದ್ದಾರೆ. ಇನ್ನೂ ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.