ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಹೀಗಾಗಿ ದರ್ಶನ್ ಹಾಗೂ ವಿಜಯಲಕ್ಷ್ಮೀ ಜೋಡಿಗೆ ಕುಟುಂಬಸ್ಥರು, ಬಂಧು ಮಿತ್ರರು, ಅಭಿಮಾನಿಗಳು ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.
2003ರ ಮೇ 19ರಂದು ದರ್ಶನ್ ಹಾಗೂ ವಿಜಯಲಕ್ಷ್ಮೀ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದರು. ಕೆಮಿಕಲ್ ಇಂಜಿನಿಯರ್ ಪದವೀಧರೆ ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ಮಧ್ಯೆ ಪ್ರೀತಿ ಶುರುವಾಗಿತ್ತು. ಬಳಿಕ ಎರಡು ಕುಟುಂಬಸ್ಥರ ಒಪ್ಪಿಗೆ ಪಡೆದು ಮದುವೆಯಾಗಿದ್ದರು.
‘ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. 19-05-2003ರ ಸೋಮವಾರ ಬೆಳಿಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್ ಮಹಲ್ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ’ ಎಂಬುದಾಗಿ ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.
ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 22 ವರ್ಷ ತುಂಬಿದೆ. ಈ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಶಾಶ್ವತ ಅಂತ ಬರೆದುಕೊಂಡಿದ್ದು ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಅವರು ರೆಸಾರ್ಟ್ವೊಂದರಲ್ಲಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.


