ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿದ್ದಾರೆ. ಇದರ ಮಧ್ಯೆ ದರ್ಶನ್ ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದಾರೆ.
Advertisement
ಬೆನ್ನು ನೋವಿನ ಸಂಬಂಧ ವೈದ್ಯರನ್ನು ನಟ ಭೇಟಿಯಾಗಿದ್ದಾರೆ. ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದರ್ಶನ್ ಆರೋಗ್ಯ ತಪಾಸಣೆ ಆಗಮಿಸಿದ್ದಾರೆ. ಬೆನ್ನು ನೋವಿನ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ದರ್ಶನ್ಗೆ ಧನ್ವೀರ್ ಸಾಥ್ ನೀಡಿದ್ದಾರೆ. ಈ ವೇಳೆ, ದರ್ಶನ್ ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್ ಜಮಾಯಿಸಿದ್ದಾರೆ.


