ಬೆಂಗಳೂರು: ನಟ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕುಟುಂಬ ಇದೀಗ ಹೈಕೋರ್ಟ್ ಮೊರೆ ಹೋಗಿದೆ.
ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಟಿ. ನರಸೀಪುರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ವಿಜಯಲಕ್ಷ್ಮಿ ಹಾಗೂ ನಾಗರಾಜ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.
ಇದನ್ನು ಪ್ರಶ್ನಿಸಿ ದರ್ಶನ್, ವಿಜಯಲಕ್ಷ್ಮಿ ಹಾಗೂ ನಾಗರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳನ್ನು ತಾವು ಸಾಕಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದಲ್ಲಿ ತಮ್ಮ ವಿರುದ್ಧ ಯಾವುದೇ ಆಧಾರವಿಲ್ಲ ಎಂದು ವಾದಿಸಿರುವ ಅರ್ಜಿದಾರರು, ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.



