ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಲಾಗಿರುವ ಜಾಮೀನಿನ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಈಗಾಗಲೇ ಸರ್ಕಾರದ ಪರ ವಿಚಾರಣೆ ನಡೆಸಿರುವ ಸುಪ್ರಿಂ ಕೋರ್ಟ್ ಇಂದು ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ಆರೋಪಿಗಳ ಪರ ವಕೀಲರ ವಾದ ಮಂಡನೆ ಆಲಿಸಿ, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಜಾಮೀನು ನೀಡುವಾಗ ಹೈಕೋರ್ಟ್ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.
ಈಗಾಗಲೇ ದರ್ಶನ್ ವಿರುದ್ಧ ಹಲವು ಅಂಶಗಳನ್ನು ಉಲ್ಲೇಖಿಸಿ ಸರ್ಕಾರದ ಪರ ವಕೀಲರು ವಾದಿಸಿದ್ದಾರೆ. ವಿಟ್ನೆಸ್‌ಗಳ ಜೊತೆ ಸುತ್ತಾಟ, ಸರ್ಜರಿ ನೆಪ ಸೇರಿ ಪ್ರಮುಖ ಅಂಶಗಳ ಬಗ್ಗೆ ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ಹೊರ ಹಾಕಿತ್ತು. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದರೆ 6 ತಿಂಗಳ ಕಾಲ ಮೇಲ್ಮನವಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಆರು ತಿಂಗಳ ಕಾಲ ಜೈಲಿನಲ್ಲೇ ಇರಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಹೀಗಾಗಿ ಕ್ಷಣಕ್ಷಣಕ್ಕೂ ದರ್ಶನ್ ಗೆ ಟೆನ್ಷನ್ ಶುರುವಾಗಿದೆ.