ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಇತರೆ ರೌಡಿ ಶೀಟರ್ ಆರೋಪಿಗಳೊಂದಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಿಗರೇಟು ಮತ್ತು ಕಾಫಿ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು. ವೈರಲ್ ಆದ ಫೋಟೋದಲ್ಲಿ 14ನೇ ಆರೋಪಿ ಪ್ರದೋಶ್ ಕಾಣಿಸಿಕೊಂಡಿಲ್ಲ.
ಆದ್ದರಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್.ರಾವ್ ಅವರನ್ನು ಮತ್ತೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹೈಕೋರ್ಟ್ ಆದೇಶ ಹಿನ್ನೆಲೆ ಇಂದು ಬಿಗಿ ಭದ್ರತೆಯಲ್ಲಿ ಪ್ರದೋಶ್ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ಪ್ರದೋಶ್ನನ್ನು ರವಾನಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು.