ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರು ಮನೆ ಊಟಕ್ಕೆ ವ್ಯವಸ್ಥೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದ್ದ ಅರ್ಜಿಯನ್ನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ದರ್ಶನ್ ಪರ ವಕೀಲರು ಮತ್ತು ಸರ್ಕಾರದ ಆಕ್ಷೇಪವಿರುವ ಎರಡು ಕಡೆಯ ಲಿಖಿತ ಪ್ರಾವಿಷನ್ ವರದಿಯನ್ನು ಕೋರ್ಟ್ ಸ್ವೀಕಾರ ಮಾಡಿದೆ. ಈ ವರದಿಯನ್ನು ಅಧ್ಯಯನ ಮಾಡಿ ನಾಳೆ ತೀರ್ಮಾನ ಮಾಡುವ ಸಾಧ್ಯತೆ ಇದೆ. ಇಂದು ದರ್ಶನ್ ಪರ ವಕೀಲರು ಮನೆ ಊಟಕ್ಕೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಹೈಕೋರ್ಟ್ ನಾಳೆ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ.



