ಕೊಲ್ಲೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಬಂದು ವಿಜಯಲಕ್ಷ್ಮೀ ಅವರು ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ ಅವರು ನವ ಚಂಡಿಕಾ ಹೋಮ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ.



