ಮಂಡ್ಯ: ಮಂಡ್ಯದಲ್ಲಿ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದೆ. ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಚಂದಗಾಲುವಿನ ಯರಳ್ಳಿ ಮಾರ್ಗದ ವಿಸಿ ನಾಲೆಯಲ್ಲಿ ನಡೆದಿದೆ.
Advertisement
ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಮೃತ ದುರ್ಧೈವಿಗಳಾಗಿದ್ದು, ಮೃತ ಮಾಸ್ತಪ್ಪ ಅವರು ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು. ಸುಮಾರು 3 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದ ಮಾಸ್ತಪ್ಪ, ಸಾಲಕೊಟ್ಟವರು ಇಂದು ಮನೆ ಬಳಿ ಗಲಾಟೆ ಮಾಡಿದ್ದಕ್ಕೆ ನೊಂದಿದ್ದರು.
ಮರ್ಯಾದೆಗೆ ಅಂಜಿ ಪತ್ನಿ ಹಾಗೂ ಪುತ್ರಿಯೊಂದಿಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.