ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿತು. ಹೌದು ಎ2 ಆರೋಪಿ ದರ್ಶನ್ ಬೇಲ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಬೇಲ್ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಹೈಕೋರ್ಟ್ ನಲ್ಲೂ ದರ್ಶನ್ ಗೆ ಜಾಮೀನು ಸಿಕ್ಕಿಲ್ಲ.
ಅಕ್ಟೋಬರ್ 22ರಂದು ಹೈಕೋರ್ಟ್ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ಅಕ್ಟೋಬರ್ 28ಕ್ಕೆ ಬೇಲ್ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಅದರಂತೆ ಇಂದು ಬೇಲ್ ಅರ್ಜಿ ವಿಚಾರಣೆ ನಡೆಸಿದ್ದು, ನಾಳೆಗೆ ವಿಚಾರಣೆ ಮುಂದೂಡಲಾಗಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆ ದರ್ಶನ್ ಮೆಡಿಕಲ್ ರಿಪೋರ್ಟ್ ಅನ್ನು ಕೂಡ ಜೈಲು ಅಧಿಕಾರಿಗಳು ಕೊರ್ಟ್ʼಗೆ ಸಲ್ಲಿಸಿದ್ದಾರೆ.
ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿ ತಂದ ಜೈಲಾಧಿಕಾರಿಗಳು ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ರಿಪೋರ್ಟ್ ಸಲ್ಲಿಸಲಿದ್ದಾರೆ. ನಾಳೆ ಅಕ್ಟೋಬರ್ 29ರಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಕೆಲ ಕಾಲ ವಾದ ಮಾಡಿದ್ರು.