ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ 11 ದಿನಗಳ ಕಾಲ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ವಿಧಾನಸೌಧದಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಸಮಿತಿ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

Advertisement

ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಕಳೆದ 100 ವರ್ಷದಲ್ಲಿ 8 ನೇ ಬಾರಿ 11 ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here