ಶಿವಮೊಗ್ಗ: ದಸರಾ ರಜೆ ಹಿನ್ನೆಲೆ ಪ್ರವಾಸಿ ತಾಣಗಳತ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ.
ಇದರ ಪರಿಣಾಮ ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಹಾಗೂ ಪ್ರವಾಸಿಗರು ಪರದಾಡುವಂತಾಗಿದೆ.
ಉಡುಪಿ, ಮಂಗಳೂರು ಮತ್ತು ಶಿವಮೊಗ್ಗ ಮಾರ್ಗದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನಗಳ ದಟ್ಟಣೆ ಉಂಟಾಗಿದೆ. ಸುಮಾರು ಒಂದು ಗಂಟೆ ಕಾಲ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.
ಇದರ ನಡುವೆ ಘಾಟಿಯ ಮಧ್ಯಭಾಗದಲ್ಲಿ ಖಾಸಗಿ ಬಸ್ವೊಂದು ಕೆಟ್ಟು ನಿಂತಿದ್ದು, ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ವಾಹನಗಳ ಸಂಚಾರವನ್ನು ಸುಗಮಗೊಳಿಸಲು ಸ್ಥಳೀಯ ಪೊಲೀಸರು ಹರಸಾಹಸಪಟ್ಟಿದ್ದಾರೆ.
ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.



