ಬೆಂಗಳೂರು: ಇತ್ತೀಚೆಗೆ ದಿವಂಗತ ಜಯಲಲಿತಾ ಅವರ ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿ ಮೇಲಿನ ಹಕ್ಕುಗಳನ್ನು ಕೋರಿ ಜಯಲಲಿತಾ ಅವರ ಕಾನೂನು ವಾರಸುದಾರರಾದ ಜೆ ದೀಪಕ್ ಮತ್ತು ಜೆ ದೀಪಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಇದೀಗ ಅವುಗಳ ಹಸ್ತಾಂತರಕ್ಕೆ ಕೋರ್ಟ್ ದಿನ ನಿಗದಿಪಡಿಸಿದ್ದು,
Advertisement
ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು ನಿಗದಿಪಡಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪನೆಯಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಎಚ್‌ಎ ಬುಧವಾರ ಆದೇಶ ಹೊರಡಿಸಿದ್ದು, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದ್ದಾರೆ.