HomeKarnataka Newsಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್: 12 ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ!

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್: 12 ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ!

For Dai;y Updates Join Our whatsapp Group

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಸುಪ್ರಸಿದ್ಧ ‘ಹಾಸನಾಂಬಾ ಜಾತ್ರಾ ಮಹೋತ್ಸವ’ (Hasanamba Jatre) ಈ ಬಾರಿ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಶ್ರದ್ಧೆ, ಭಕ್ತಿ ಹಾಗೂ ಸಡಗರದಿಂದ ಆಚರಿಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾಹಿತಿ ನೀಡಿದ್ದಾರೆ.

  • ಅಕ್ಟೋಬರ್ 29 (ಗುರುವಾರ): ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದೆ. ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ.
  • ಅಕ್ಟೋಬರ್ 30 ರಿಂದ ನವೆಂಬರ್ 10: ಮಾರನೇ ದಿನದಿಂದ ನವೆಂಬರ್ 10ರವರೆಗೆ ಒಟ್ಟು 12 ದಿನಗಳ ಕಾಲ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
  • ನವೆಂಬರ್ 11: ಶಾಸ್ತ್ರೋಕ್ತವಾಗಿ ಹಾಸನಾಂಬಾ ದೇವಾಲಯದ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುವುದು.

ಸೆಪ್ಟೆಂಬರ್ 26ಕ್ಕೆ ಪೋಸ್ಟರ್ ಹಾಗೂ ವೆಬ್‌ಸೈಟ್ ಬಿಡುಗಡೆ: ಹಾಸನಾಂಬಾ ಜಾತ್ರಾ ಮಹೋತ್ಸವದ ಪ್ರಯುಕ್ತ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕೃತ ಪೋಸ್ಟರ್ ಬಿಡುಗಡೆ ಹಾಗೂ ಮಾಹಿತಿ ವೆಬ್‌ಸೈಟ್ ಲಾಂಚ್ ಮಾಡಲಿದ್ದಾರೆ.

ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಈಗಾಗಲೇ ಬರಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ಹೀಗಾಗಿ ಬರದ ಛಾಯೆಯ ಹಿನ್ನೆಲೆಯಲ್ಲಿ ತೀರಾ ಅದ್ದೂರಿಯಾಗಿ ಅಲ್ಲದಿದ್ದರೂ, ಶ್ರದ್ಧೆ, ಭಕ್ತಿ ಮತ್ತು ಸಡಗರದಿಂದ ಜಾತ್ರಾ ಮಹೋತ್ಸವ ನಡೆಸಲು ನಿರ್ಧರಿಸಲಾಗಿದೆ.

ಹಬ್ಬದ ಯಶಸ್ವಿ ನಿರ್ವಹಣೆಗೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಾತ್ರೆಯ ಭಾಗವಾಗಿ ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ವೈಭವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img