ದಾವಣಗೆರೆ:- ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಡಿವೈಎಸ್ಪಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ಜರುಗಿದೆ.
ಹನುಮಂತಪ್ಪ ವೈ ತುರಾಯಿ (70) ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಆಪ್ತರಿಂದ ತಿಳಿದು ಬಂದಿದೆ. ಮನೆಯಲ್ಲಿ ಒಬ್ಬರೇ ಕೂತಿದ್ದಾಗ ಬ್ಯಾರಲ್ ಗನ್‍ನಿಂದ ಶೂಟ್ ಮಾಡಿಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



