ದಾವಣಗೆರೆ/ಬಾಗಲಕೋಟೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ.
ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಕಣಕ್ಕೆ ಇಳಿದಿದ್ದು, ಮತದಾರರು ಯಾರ ಕೈ ಹಿಡಿಯುತ್ತಾರೆ ಎಂಬುದಕ್ಕೆ ಕುತೂಹಲ ಮೂಡಿದೆ.
ಮತದಾನ ವಿವರ – ಬಾಗಲಕೋಟೆ – ದಾವಣಗೆರೆ ದಕ್ಷಿಣ:
ಮತಗಟ್ಟೆ – 322 – 284
ಸಿಬ್ಬಂದಿ – 2500 – 1,489
ಕಣದಲ್ಲಿರುವ ಅಭ್ಯರ್ಥಿಗಳು – 9 – 25
ಒಟ್ಟು ಮತದಾರರು – 2,59,797 – 2,31,072
ಪುರುಷರು – 1,26,999 – 1,13,399
ಮಹಿಳೆಯರು – 1,32,775 – 1,17,690
ಸಿಬ್ಬಂದಿ ಮತ್ತು ಭದ್ರತೆ:
ಚುನಾವಣಾ ಕರ್ತವ್ಯಕ್ಕಾಗಿ 1,430ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೃದಯಾಘಾತ ಮತ್ತು ಬಿಪಿ ಸಮಸ್ಯೆ ಇರುವ ಸಿಬ್ಬಂದಿಗಾಗಿ ಪ್ರತಿ ಕೇಂದ್ರದಲ್ಲೂ ಹೆಲ್ತ್ ಚೆಕಪ್ ವ್ಯವಸ್ಥೆ ಮಾಡಲಾಗಿದೆ ಎರಡೂ ಕ್ಷೇತ್ರಗಳಾದ್ಯಂತ ವ್ಯಾಪಕ ಬಂದೋಬಸ್ತ್ ನಡುವೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮತದಾನದ ಸಮಯ ಮತ್ತು ಸೌಲಭ್ಯ:
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿರಿಯ ನಾಗರಿಕರು ಮತ್ತು ಅಂಗವಿಕಲರನ್ನು ಮತಗಟ್ಟೆಗೆ ಕರೆತರಲು ಜಿಲ್ಲಾಡಳಿತವು ಉಚಿತ ವಾಹನ ಸೌಲಭ್ಯವನ್ನು ಒದಗಿಸಿದೆ. ಸುಡು ಬಿಸಿಲಿನ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದೆ. ಇಂದು ದಾಖಲಾಗುವ ಮತಗಳ ಎಣಿಕೆಯು ಮೇ 4ರಂದು ನಡೆಯಲಿದ್ದು, ಅಂದು ಫಲಿತಾಂಶ ಪ್ರಕಟವಾಗಲಿದೆ.



