ದಾವಣಗೆರೆ:- ಇಲ್ಲಿನ ವಿದ್ಯಾನಗರದ ಮನೆಯ ಇಂಟರ್ ಲಾಕ್ ಮುರಿದು ಕಳ್ಳತನ ಮಾಡಿದ್ದ ಕುಖ್ಯಾತ ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಶ್ಯಾಮ್ ಸಿಂಗ್ (28) ಕವರ್ ಪಾಲ್(24) ಪ್ರತಾಪ್ ಸಿಂಗ್ (33) ಬಂಧಿತ ಆರೋಪಿಗಳು. ಆರೋಪಿಗಳು ಆಗಸ್ಟ್ 30 ರಂದು ವಿದ್ಯಾನಗರ ನಿವಾಸಿ ರಂಗನಾಥ ಅವರು ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ವೇಳೆ, ಮನೆ ಗುಡಿಸಿ ಗುಂಡಾಂತರ ಮಾಡಿದ್ದರು. ಅಂದ್ರೆ ಮನೆಯಲ್ಲಿ 15 ಲಕ್ಷ 37 ಸಾವಿರ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ಎಗರಿಸಿ ಪರಾರಿ ಆಗಿದ್ಧರು.
ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು, ಇದೀಗ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ನ ಸೂರತ್ ಸಿಟಿ ಸಾರೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳರು ತಲೆಮರಿಸಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಸಾರೋಲಿ ಪೊಲೀಸ್ ಸಹಾಯದೊಂದಿಗೆ ಮೂವರ ಹೆಡೆಮುರಿ ಕಟ್ಟುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಹರಿಹರ, ಹಳಿಯಾಳ , ಧಾರವಾಡ, ತುಮಕೂರು ಬಡಾವಣೆ, ತಿಪಟೂರು, ಮದ್ಯಪ್ರದೇಶದ ಭೂಪಾಲ್ ಸೇರಿದಂತೆ ವಿವಿಧ ಠಾಣೆಗಳಲ್ಲಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರ ಪತ್ತೆ ಕಾರ್ಯದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಸಿಬ್ಬಂದಿಗೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಡಿಸಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.