ದಾವಣಗೆರೆ:- ನಗರದ ಕುಂದುವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
22 ವರ್ಷದ ಚೇತನ್, 23 ವರ್ಷದ ಮನು ಮೃತರು. ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಳೆದ ಎರಡು ದಿನದಿಂದ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರು. ಆದರೆ ಇಂದು ಕುಂದುವಾಡ ಕೆರೆಯಲ್ಲಿ ಇಬ್ಬರ ಯುವಕರ ಶವ ಪತ್ತೆ ಆಗಿವೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.



