HomeKarnataka Newsಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ FIR

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ FIR

For Dai;y Updates Join Our whatsapp Group

Spread the love

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ ಸಿಬ್ಬಂದಿಗಳ ವೇತನದ ಹೆಸರಿನಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಖಜಾನೆ ಇಲಾಖೆಯು ಡಿಜಿಟಲ್ ಸಹಿ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಬಳಿಕ ಈ ಅಕ್ರಮ ಬಯಲಾಗಿದೆ.

ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ನೀಡಿದ ದೂರಿನ ಮೇರೆಗೆ ಹೊರಗುತ್ತಿಗೆ ನೌಕರರಾದ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮೆಹಬೂಬ್ ಭಾಷಾ ಹಾಗೂ VMH ಎಂಟರ್‌ಪ್ರೈಸಸ್‌ನ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಸೈಯದ್ ಸಾದಿಕ್ ಪರಾರಿಯಾಗಿದ್ದಾನೆ.

ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಿಗ್ನೇಚರ್ ಸೆರ್ಟಿಫಿಕೆಟ್ (DSC) ಕೀ ಕಳವು ಮಾಡಿ ದುರುಪಯೋಗಪಡಿಸಿಕೊಂಡಿರುವ ಆರೋಪವೂ ಹೊರಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾಹಿತಿ ನೀಡಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!